Wednesday, January 22, 2025
ಸುದ್ದಿ

ಕಕ್ಕೂರು ಸ ಹಿ ಪ್ರಾ ಶಾಲಾ ಪ್ರತಿಭಾಕಾರಂಜಿ ಕಾರ್ಯಕ್ರಮ : ಸರಕಾರಿ ಶಾಲೆಯ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ: ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಇದ್ದ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು ಶಿಕ್ಷಕರ ನೇಮಕಾತಿಯೂ ನಡೆದಿದ್ದು ಗುಣಮಟ್ಡದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಸರಕಾರಿ ಹಿಪ್ರಾ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರ‌ಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಇರಬೇಕಾಗಿದೆ. ಶಿಕ್ಷಕರೊಳಗೆ ಪರಸ್ಪರ ಹೊಂದಾಣಿಕೆಯ ಕೊರತೆ ಇದ್ದಲ್ಲಿ‌ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ, ಹೊಂದಾಣಿಕೆಯಲ್ಲಿ ನಡೆದುಕೊಳ್ಳದ ಶಿಕ್ಷಕರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಶಿಕ್ಷಣ ಗುಮಟ್ಟದಿಂದ ಇರಬೇಕಾದರೆ ಶಾಲೆಯಲ್ಲಿ ಉತ್ತಮ ವಾತಾವರಣ ಇರಬೇಕು ,ಉತ್ತಮ ವಾತಾವರಣ ನಿರ್ಮಾಣಕ್ಕೆ ಶಿಕ್ಷಕರು‌ಮತ್ತು ಪೋಷಕರು ಜೊತೆಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು