Monday, November 25, 2024
ಸುದ್ದಿ

ನ.14 ರಂದು ಅಖಿಲ ಭಾರತ ಸಹಕಾರ ಸಪ್ತಾಹ- 2023 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ಮಹಾಮಂಡಲ ( ನಿ.) ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು, ದ.ಕ.ಜಿಲ್ಲಾ.ಸಹಕಾರಿ ಯೂನಿಯನ್ ಬ್ಯಾಂಕ್ (ಲಿ.) ಮಂಗಳೂರು ಹಾಗೂ ಮಂಚಿ ವ್ಯವಸಾಯ ಸೇವಾ ಸಹಕಾರ ಸಂಘ ನಿ.ಮಂಚಿ ಕುಕ್ಕಾಜೆ ಮತ್ತು ಬಂಟ್ವಾಳ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ- 2023 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನ. 14 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂಚಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಲಿದೆ.

ಮಂಚಿಯ ಸಹಕಾರಿ ಬ್ಯಾಂಕ್ ನ ಸಭಾಂಗಣದಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಇದರ ಬಗ್ಗೆ ಮಾತನಾಡಿದರು. ಎಲ್ಲರಿಗೂ ಸಹಕಾರ ನೀಡುವ ಕ್ಷೇತ್ರವಾದ ಸಹಕಾರಿ ಕ್ಷೇತ್ರದ ಸಹಕಾರ ಸಪ್ತಾಹ ಕಾರ್ಯಕ್ರಮ ಯಶಸ್ವಿಯಾಗಲು ಸರ್ವರ ಸಹಕಾರ ಬೇಕು ಎಂದು ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನ ಸಭಾ ಸ್ಪೀಕರ್ ಯುಟಿ.ಖಾದರ್ ಸಮಾವೇಶದ ಉದ್ಘಾಟನೆ ನಡೆಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಮಾವೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ಧ್ವಜಾರೋಹಣ ನಡೆಸಲಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರು ಸಹಕಾರ ಸಪ್ತಾಹದ ಮೆರವಣಿಗೆ ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.ಸಿ.ಸಿ.ಬ್ಯಾಂಕ್ ನ ನಿರ್ದೇಶಕ ಟಿ.ಜೆ.ರಾಜಾರಾಮ ಭಟ್ ಸಹಕಾರ ಸಂಘ ಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಅನನ್ಯವಾದ ಸಾಧನೆ ಮಾಡಿದ ಹಲವು ಗಣ್ಯರನ್ನು ಅಭಿನಂದಿಸಲಾಗುತ್ತದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ತಾಳೆ ಕೆಲಸಗಾರರ ವಿ.ಸ.ಸ.ಇರಾ ಇದರ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಂಚಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಮ್ಮರ್ ಮಂಚಿ, ಉಪಾಧ್ಯಕ್ಷ ವಿಶ್ವನಾಥ ನಾಯ್ಕ ಎನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಪಿ.ನಿರ್ದೇಶಕ ರುಗಳಾದ ಚಂದ್ರಹಾಸ ಕರ್ಕೇರ, ಅಬ್ದುಲ್ ರಹಿಮಾನ್, ಭಾಗೀರಥಿ ಎಮ್, ಮೋಹನ್ ದಾಸ ಶೆಟ್ಟಿ, ಕೇಶವ ರಾವ್ ಎನ್, ದಿವಾಕರ ನಾಯಕ್, ಸುಧಾಕರ ರೈ, ಫಿಲೋಮಿನಾ ,ಸಂಧ್ಯಾಕುಮಾರಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ, ಮಹಾದೇವ ವಿ.ಸ.ಸಂಘ ಮಂಚಿ ಇದರ ಅಧ್ಯಕ್ಷ ಮೋಹನ್ ದಾಸ ಶೆಟ್ಟಿ, ಲಕ್ಮೀ ನರಸಿಂಹ ವಿ.ಸ.ಸಂಘ ಇದರ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮುರಳೀಧರ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.