Wednesday, January 22, 2025
ಕ್ರೈಮ್ರಾಜ್ಯಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೋಕ್ಸೋ (Pocso Case) ಕಾಯ್ದೆ ಅಡಿ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ (MurughaShri) ಜಾಮೀನು (Bail) ಅರ್ಜಿ ವಿಚಾರಣೆಯ ಆದೇಶವನ್ನು ಹೈಕೋರ್ಟ್ (High Court) ಇಂದು ಪ್ರಕಟಿಸಲಿದೆ. ಈ ಮೂಲಕ ಸ್ವಾಮೀಜಿಯ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ ಜೈಲಿನಲ್ಲಿರುವ ಸ್ವಾಮೀಜಿ ಜಾಮೀನು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಅ.31 ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಏನಿದು ಪ್ರಕರಣ?
ಚಿತ್ರದುರ್ಗದ ಮುರುಘಾಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಮೊರೆ ಹೋಗಿದ್ದರು. ಚಿತ್ರದುರ್ಗದ ಮಠದ ವಿದ್ಯಾರ್ಥಿ ನಿಲಯದಲ್ಲಿದ್ದ ನಮ್ಮ ಮೇಲೆ ಸ್ವಾಮೀಜಿ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಅಮಲು ಬರುವಂತೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು. ಅದಾದ ನಂತರ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿತ್ತು. ಬಳಿಕ ಪೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು.