Wednesday, January 22, 2025
ಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಆರೋಪಿ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ..!!! – ಕಹಳೆ ನ್ಯೂಸ್

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ. ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಶವ ಪಡೀಲ್ ರನ್ನು ಕೊಲೆ ಪ್ರಕರಣದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು