Thursday, January 23, 2025
ಸುದ್ದಿ

ರಾಷ್ಟಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಕಹಳೆ ನ್ಯೂಸ್

ಪುತ್ತೂರು, : ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟçಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ರಿಲೇ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್, ನಿಹಾಲ್ ರಾಜ್, ದ್ವಿತೀಯ ವಿಜ್ಞಾನ ವಿಭಾಗದ ಪ್ರಮಥ್ ರೈ, ಧನುಷ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.


ಪ್ರಥಮ ಪಿಯುಸಿ ಕಲಾವಿಭಾಗದ ನಿಶಾ 400  ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡು ಅಮೋಘ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು