Recent Posts

Monday, January 20, 2025
ಸುದ್ದಿ

ನೆರೆ ವಿಕೋಪ: ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರೆ ವಿಕೋಪದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು. ಅಳಪೆಯ ಬಶೀರ್ ಹಾಗೂ ಪಡಿಲ್‌ನ ನಿವಾಸಿ ವಿನಾಯಕ್ ಅವರಿಗೆ ಅಂದಾಜು ಮೊತ್ತ 70 ಸಾವಿರದಷ್ಟು ಮೊತ್ತದ ಚೆಕ್‌ಅನ್ನು ಶಾಸಕ ಡಿ ವೇದವ್ಯಾಸ ಕಾಮತ್ ಅವರು ನೀಡಿದರು.

ಬಳಿಕ ಮಾತನಾಡಿದ ಅವರು ಭಾರಿ ಮಳೆಯಿಂದ ಮಂಗಳೂರು ದಕ್ಷಿಣದ ಹಲವೆಡೆ ನಾಗರಿಕರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದಾರೆ.ಮತ್ತು ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಶೀಲಿಸಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು