ಬೆಂಗಳೂರು : ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಟಿಯಿಂದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಚಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದುತ್ತಿದ್ದರೂ ಸಹ ಕಡ್ಡಾಯವಾಗಿ ಕನ್ನಡವನ್ನು ಓದಲೇಬೇಕು. ಶಿಕ್ಷಣವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವ ದೃಷ್ಠಿಯಿಂದ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಬಾರಿ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 13 ಸಾವಿರ ಖಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಶಾಲೆಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ನಿಮ್ಮ ಸಹಕಾರ ನನಗೆ ಅಗತ್ಯ ಎಂದು ಶಿಕ್ಷಣ ಸಚಿವ ಮದು ಬಂಗಾರಪ್ಪ ಹೇಳಿದರು.