Wednesday, January 22, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಜಯೇಂದ್ರ ಯಡಿಯೂರಪ್ಪಗೆ ದೀಪಾವಳಿ ಭರ್ಜರಿ ಗಿಫ್ಟ್ ; ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ ಹೈಕಮಾಂಡ್..! – ಕಹಳೆ ನ್ಯೂಸ್

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದ ಶಾಸಕರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರೊಂದಿಗೆ, ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕೊನೆಗೊಂಡಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು