Monday, February 3, 2025
ಸುದ್ದಿ

ದ.ಕ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸದಸ್ಯರಾದ ಶ್ರೀ. ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ, ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.