ಪುತ್ತೂರು: ಬಲ್ನಾಡಿನ ವಾರ್ಡ್ ನಂ.31ರಲ್ಲಿ ಹೈಮಾಸ್ಕ್ ದೀಪವನ್ನು ಪುತ್ತೂರಿನ ನಿಕಟ ಪೂರ್ವ ಶಾಸಕರಾದ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ನಿಕಟ ಪೂರ್ವ ಅಧ್ಯಕ್ಷರಾದ ಜೀವಂದರ್ ಜೈನ್, ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ, ಬಲ್ನಾಡ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಭಟ್ ಬಬ್ಬಿಲಿ, ಸದಸ್ಯರಾದ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಪ್ರಕಾಶ್ ಕಲ್ಲಾಡಿ, ವಸಂತ್ ಬಿ.ಕೆ., ಚರಣ್ ಕುಲಾಲ್, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ರಿ. ನ ಅಧ್ಯಕ್ಷರು ಸದಸ್ಯರು ಹಾಗೂ ಊರಿನ ಜನರು ಉಪಸ್ಥಿತರಿದ್ದರು.