ಇಂದು ಮಂಗಳೂರಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಜನವರಿಯಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫೆಸ್ಟ್” ಕಾರ್ಯಕ್ರಮದ ಲಾಂಛನ ಬಿಡುಗಡೆ – ಕಹಳೆ ನ್ಯೂಸ್
ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023ರ ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫೆಸ್ಟ್ ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು.
ಅದರ ಮುಂದುವರಿದ ಭಾಗವಾಗಿ ಈ ಬಾರಿ ಜನವರಿ 2024 ರಲ್ಲಿ ದ್ವಿತೀಯ ವರ್ಷದ ಮಂಗಳೂರಿನ “ಸ್ಟ್ರೀಟ್ ಫುಡ್ ಫೆಸ್ಟ್” ಆಯೋಜನೆ ಮಾಡಲಾಗುತ್ತಿದ್ದು, ಇದರ ಲಾಂಛನ ಬಿಡುಗಡೆ ಕಾರ್ಯಕ್ರಮವು ಇಂದು ಸಂಜೆ ಮಣ್ಣಗುಡ್ಡ ಗುರ್ಜಿ ವೃತ್ತದ ಹಿಂದುಗಡೆಯ ಮೈದಾನದಲ್ಲಿ ನಡೆಯಲಿದೆ.