Recent Posts

Sunday, January 19, 2025
ಸುದ್ದಿ

ಬೆಂಗಳೂರು ಕಂಬಳ: ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದ ಸ್ಪೀಕರ್ ಖಾದರ್  – ಕಹಳೆ ನ್ಯೂಸ್

ಪುತ್ತೂರು: ನವೆಂಬರ್ 24 ರಿಂದ 26 ತನಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರು ವಿವಿಧ ಇಲಾಖಾ ಅಧಿಕಾರಿಗಳ ಸಭೆಯನ್ನು ನಡೆಸಿದರು.

ಬೆಂಗಳೂರು ಕಂಬಳಕ್ಕೆ ಲಕ್ಷಾಂತರ ಮಂದಿ ಕಂಬಳಾಭಿಮಾನಿಗಳು ಆಗಮಿಸಲಿದ್ದು, ಮುಖ್ಯಮಂತ್ರಿ ಮತ್ತು ಸಚಿವರು, ಬಾಲಿವುಡ್ ನಟರು, ಕನ್ನಡ ಚಿತ್ರ ರಂಗದ ಪ್ರಮುಖರು, ತಮಿಳು , ತೆಳುಗು ಸೇರಿದಂತೆ ವಿವಿಧ ಭಾಷಾ ಚಲನಚಿತ್ರ ನಟರು , ವಿವಿಐಪಿಗಳು ಭಾಗವಹಿಸುವ ಕಾರಣ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕಂಬಳ ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ಎಂಬಂತೆ ರಾಜಧಾನಿಯಲ್ಲಿ ಆಹೋರಾತ್ರಿ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಾಂತರ ಮಂದಿ ಭಾಗವಹಿಸುವ ಕಾರಣಕ್ಕೆ ಟ್ರಾಫಿಕ್ ಸಮಸ್ಯೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಬಿಬಿಎಂಪಿ ಅರಣ್ಯ ಇಲಾಖೆ ಸೇರಿದಂತೆ ಕಂಬಳ ಕಾರ್ಯಕ್ರಮಕ್ಕೆ ಸಂಬಂದಿಸಿದಂತೆ ಅಧಿಕಾರಿಗಳ ಸಭೆಯನ್ನು ಕರೆದು ಅವರ ಜೊತೆ ಚರ್ಚೆ ನಡೆಸಿದರು. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲಖಾ ಅಧಿಕಾರಿಗಳಿಗೆ ಸ್ಪೀಕರ್ ರವರು ಮಾಹಿತಿ ಮತ್ತು ಸೂಚನೆಯನ್ನು ನೀಡಿದರು. ಸಭೆಯಲ್ಲಿ ಕಂಬಳ ಸಮಿತಿಯ ಪ್ರಮುಖರಾದ ಬಂಜಾರಾ ಪ್ರಕಾಶ್ ಶೆಟ್ಟಿ, ಗುಣರಂಜನ್ ಶೆಟ್ಟಿ, ಗುರುಕಿರಣ್ ಸೇರಿದಂತೆ ಪ್ರಮುಖರು ಉಪಸ್ತಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು