Sunday, January 19, 2025
ಕ್ರೀಡೆಸುದ್ದಿ

Big Breaking: ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾ ಶ್ರೇಷ್ಠ ಪ್ರದರ್ಶನ, ಪ್ರಚಂಡ ಗೆಲುವು ; ಕಿವೀಸ್ ಮಣಿಸಿ ವಿಶ್ವಕಪ್ ಫೈನಲ್​ಗೇರಿದ ಭಾರತ..! – ಕಹಳೆ ನ್ಯೂಸ್

ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ.

 

ಕೋಟ್ಯಾಂತರ ಭಾರತೀಯರ ಅದೊಂದು ಕನಸು ನನಸಾಗಿದೆ. ಬರೋಬ್ಬರಿ 12 ವರ್ಷಗಳಿಂದ ಟೀಂ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಕೊನೆಗೆ ಸನಿಹವಾಗಿದೆ. ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಈ ಮೂಲಕ 2019ರ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೆಮಿಫೈನಲ್​ನಲ್ಲಿ ಸೋಲಿಸಿ ಟೂರ್ನಿಯಿಂದ ಹೊರಹಾಕಿದ್ದ ನ್ಯೂಜಿಲೆಂಡ್​ಗೆ ರೋಹಿತ್​ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು