Monday, January 20, 2025
ಸುದ್ದಿ

ಯಾರಾಗಲಿದ್ದಾರೆ ವಿಪಕ್ಷ ನಾಯಕ..? : ಮುನ್ನಲೆಯಲ್ಲಿ ಕೇಳಿ ಬರುತ್ತಿದೆ ಎರಡು ಪ್ರಬಲ ನಾಯಕರ ಹೆಸರು – ಕಹಳೆ ನ್ಯೂಸ್

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ತಿಂಗಳುಗಳೇ ಕಳೆದಿದೆ. ಬಿಜೆಪಿಯ ವಿಪಕ್ಷ ನಾಯಕ ಯಾರು ಅನ್ನೋ ಆಯ್ಕೆ ಇನ್ನು ನಡೆದಿಲ್ಲ. ಹೀಗಾಗಿ ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆ ಅನ್ನೋ ಬಿಸಿ ಬಿಸಿ ಚರ್ಚೆಯಾಗುತ್ತಿದ್ದು, ಇದರಲ್ಲಿ ಇಬ್ಬರ ಹೆಸರು ಮುನ್ನಲೆಯಲ್ಲಿ ಕೇಳಿ ಬರುತ್ತಿದೆ.

ಹೊಸ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ ಹಲವರ ಹೆಸರು ಕೆಲಿ ಬಂದಿತ್ತು ಆದ್ರೆ ಕೊನೆಗೆ ಬಿಎಸ್ ಯಡಿಯೋರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಇವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ, ಈಗ ಬಿಜೆಪಿಯ ವಿಪಕ್ಷ ನಾಯಕ ಯಾರಾಗಲಿದ್ದಾರೆ ಅನ್ನೋ ಕುತೂಹಲ ಜನರಲ್ಲಿ ಹೆಚ್ಚಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯದ ಮಟ್ಟಿಗೆ ಬಿಜೆಪಿಯಲ್ಲಿ ಪ್ರಬಲರ ಹೆಸರುಗಳು ಕೇಳಿ ಬರುತ್ತಿದ್ದು, ಇವರಲ್ಲಿ ಯಾರು ನಾಯಕರಾಗಲಿದ್ದಾರೆ ಎಂಬ ಕುತೂಹಲ ಈಗ ಬಿಜೆಪಿ ಕಾರ್ಯಕರ್ತರಲ್ಲಿ ಮನೆ ಮಾಡಿದೆ. ವಿಪಕ್ಷ ನಾಯಕರ ರೇಸ್‌ನಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಹಾಗೂ ಆರ್.ಅಶೋಕ್ ಅವರ ಹೆಸರುಗಳು ಮುನ್ನಲೆಯಲ್ಲಿ ಪ್ರಬಲವಾಗಿ ಕೇಳಿ ಬರುತ್ತಿದೆ. ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತಾರೆ ಕಾದುನೋಡಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು