Recent Posts

Friday, November 22, 2024
ಸುದ್ದಿ

ಪುತ್ತಿಲ ಪರಿವಾರದ ಕಚೇರಿಯ ಮುಂಭಾಗ ತಲವಾರ್ ಝಳಪಿಸಿದ ಪ್ರಕರಣ : ದಿನೇಶ್ ಪಂಜಿಗ ಸಹಿತ 7 ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ನ.10 ರಂದು ಪುತ್ತೂರು ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ತಂಡವೊಂದು ತಲವಾರು ತಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಶಾಂತಿಗೋಡು ಗ್ರಾಮದ ದಿನೇಶ್ ಪಂಜಿಗ, ನರಿಮೊಗರು ಗ್ರಾಮದ ಭವಿತ್, ಬೊಳುವಾರು ನಿವಾಸಿ ಮನ್ವಿತ್, ಚಿಕ್ಕಮುಡ್ನೂರು ನಿವಾಸಿ ಜಯಪ್ರಕಾಶ್, ಚರಣ್, ಬನ್ನೂರು ಗ್ರಾಮದ ಮನೀಶ್, ವಿನೀತ್ ಮತ್ತು ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪ್ರಾಪ್ತರನ್ನು ರಾತ್ರಿ ವೇಳೆ ಬಿಡುಗಡೆ ಮಾಡಲಾಗಿತ್ತು. ಉಳಿದ 7 ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ
ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು
ಮಂಜೂರುಗೊಳಿಸಿದೆ. ಮಾದವ ಪೂಜಾರಿ, ರಾಕೇಶ್ ಬಲ್ನಾಡು, ಯಶವಂತ ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು