Tuesday, January 21, 2025
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಮೇಧಾನ್ವೇಷ 2023 : ಪ್ರತಿಭಾ ಅನಾವರಣಕ್ಕೆ ನೈಜ ಅವಕಾಶ ಸಿಕ್ಕಾಗ ಸದುಪಯೋಗಪಡಿಸಿಕೊಳ್ಳಿ:ಡಾ.ಹೆಚ್. ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ತಮ್ಮ ಪ್ರತಿಭೆಗೆ ಅವಕಾಶ ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ನಿಮಗೆ ಸಿಗುವ ಅನೇಕ ಅನುಭವಗಳನ್ನು ಸಂಗ್ರಹಿಸಿಕೊಂಡಾಗ ಮಾತ್ರ ನಿಮ್ಮಲ್ಲಿನ ನೈಜ ಪ್ರತಿಭೆಗಳ ಅನಾವರಣಗೊಳ್ಳುತ್ತದೆ. ಕೆಲವು ಪ್ರತಿಭೆಗಳು ವಿದ್ಯಾರ್ಥಿಗಳಲ್ಲಿ ಹುಟ್ಟಿನಿಂದಲೇ ಕರಗತವಾಗಿದ್ದರೆ,‌ ಇನ್ನು ಕೆಲವೊಂದು ಪ್ರತಿಭೆಗಳು ಬೆಳೆಯುತ್ತ ರೂಢಿಯಾಗುತ್ತದೆ. ಇಂದಿನ ಈ ಕಾರ್ಯಕ್ರಮವು ನಿಮ್ಮಲ್ಲಿನ ನೈಜ ಪ್ರತಿಭೆಗಳ ಅನಾವರಣಕ್ಕಾಗಿ ಉತ್ತಮ ವೇದಿಕೆಯಾಗಿ ಮೂಡಿಬರಲಿ ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಹೆಚ್. ಮಾಧವ ಭಟ್ ಹೇಳಿದರು.

ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ದ ಲಲಿತಕಲಾ ಸಂಘ,ಯಕ್ಷರಂಜಿನಿ, ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಮೇಧಾನ್ವೇಷ 2023 ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಅಧ್ಯಕ್ಷೀಯ ಮಾತುಗಳನ್ನಾಡಿ ,ಶಿಕ್ಷಣವು ಬದುಕಿಗೆ ಊರುಗೋಲಾಗಬೇಕು.ಅದು ಕೇವಲ ತರಗತಿಗಳಿಗೆ ಮಾತ್ರ ಸೀಮಿತವಾಗಿರಬಾರದು. ಪದವಿ ಎಂಬುದು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರವಾದ ಕಾಲಘಟ್ಟ. ಈ ಹಂತದಲ್ಲಿ ಸವಾಲುಗಳಿಗೆ ನಮ್ಮನ್ನು ನಾವು ಒಡ್ಡಿಕೊಳ್ಳುತ್ತೇವೆ. ಇವು ಸಮಸ್ಯೆಗಳನ್ನು ಹೇಗೆ ಎದುರಿಸಿ ಹೊರ ಬರಬೇಕೆಂದು ತಿಳಿಸುತ್ತದೆ. ನಮಗೆ ಇಚ್ಛಾಶಕ್ತಿ ಮತ್ತು ಗುರಿ ಎಂಬುವುದು ಅಗತ್ಯ. ಸ್ಪಷ್ಟ ಗುರಿ ಇದ್ದರೆ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಸಮಾರೋಪ ಸಮಾರಂಭ
ಅವಕಾಶಗಳು ಸಿಕ್ಕಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ. ಮಕ್ಕಳಿಗೆ ಅಗತ್ಯವಾದ ವಿಚಾರಗಳನ್ನು ಅವರೇ ಅನ್ವೇಷಣೆ ಮಾಡಬೇಕು. ವಿದ್ಯಾವಂತರು ಉತ್ತಮ ವ್ಯಕ್ತಿತ್ವದವರಾಗಿರಬೇಕು. ನಮ್ಮ ವ್ಯಕ್ತಿತ್ವವು ನಿರ್ಮಾಣಗೊಳ್ಳುವುದು ಉತ್ತಮ ಸಂಸ್ಕಾರದಿಂದ. ಅವುಗಳಿಗೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ. ನಮ್ಮ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾದ ಕಾಲೇಜನ್ನು ಆಯ್ದುಕೊಂಡಾಗ ನಮ್ಮಲ್ಲಿನ ಪ್ರತಿಭೆ ಬೆಳಕಿಗೆ ಬರುತ್ತದೆ. ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಕಲಾವಿದೆ ಶುಭ ಅಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮೇಧಾನ್ವೇಷ 2023 ವಿನ್ನರ್ಸ್ ಗಳಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ರನ್ನರ್ಸ್ ಗಳಾಗಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿಗಳು ಪಡೆದುಕೊಂಡರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ವಿಶೇಷ ಆಡಳಿತಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ್ ನ್ಯಾಕ್.ಬಿ, ಪರೀಕ್ಷಾಂಗ ಕುಲಸಚಿವ ಡಾ.ಹೆಚ್.ಜಿ.ಶ್ರೀಧರ್, ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ.ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಸ್ವಾಗತಿಸಿ, ಲಲಿತ ಕಲಾ ಸಂಘದ ಸಂಯೋಜಕಿ ಮತ್ತು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ.ಎಸ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ ನಿರ್ವಹಿಸಿದರು.