Monday, January 20, 2025
ಸುದ್ದಿ

“ನಾ ಕಂಡಂತೆ ಪೊಲೀಸ್” ಎಂಬ ಪ್ರಬಂಧ ಸ್ಪರ್ಧೆಯ ನಿಯಮಾವಳಿಯ ಪೋಸ್ಟರ್ ಬಿಡುಗಡೆಗೊಳಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ಧಲಿಂಗಪ್ಪ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ನ.18ರಂದು ನಾ ಕಂಡಂತೆ ಪೊಲೀಸ್ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ.

ಕನ್ನಡ ಶಾಲೆ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ಏರ್ಪಡಿಸಿರುವ ಈ ಕಾರ್ಯಕ್ರಮದ ನಿಯಮಾವಳಿಯ ಪೋಸ್ಟರ್ ಅನ್ನು ಪ್ರಬಂಧ ಸ್ಪರ್ಧೆಯ ಉದ್ಘಾಟಕರೂ ಆಗಿರುವ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ಧಲಿಂಗಪ್ಪ ಅವರು ಬಿಡುಗಡೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು