Recent Posts

Sunday, January 19, 2025
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟೀಸ್ ; ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದ ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ – ಕಹಳೆ ನ್ಯೂಸ್

ಮಂಗಳೂರು : ಕಾಂಗ್ರೆಸ್ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪದೇ ಪದೇ ನಡೆಸುತ್ತಿರುವ ಹುನ್ನಾರದಿಂದ ನಮ್ಮ ಸಮಾಜದ ಶಕ್ತಿ ಕುಂಠಿತವಾಗುತ್ತವೆ. ಎಂಬ ಕನಸು ಕಂಡಿದ್ದರೆ ಇಂದೇ ಬಿಟ್ಟು ಬಿಡಿ. ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದು ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಇತಿಹಾಸವನ್ನು ನೆನಪಿಸಿದರೆ ಇಂತಹ ಸನ್ನಿವೇಶಗಳು ನಮ್ಮ ಶಕ್ತಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ದ್ವೇಷದ ರಾಜಕಾರಣವನ್ನು ಬದಿಗಿಟ್ಟು ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಪೂರೈಸುವತ್ತ ತಮ್ಮ ಗಮನ ಹರಿಸಿ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು