ಉಡುಪಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ 2023 ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್
ಉಡುಪಿ : ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜ ಜೀವನದಲ್ಲಿ ಎಂದಿಗೂ ಸೋಲ ಬಾರದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂ ಲ ಕೇಂದ್ರ, ಉಡುಪಿ ವತಿಯಿಂದ ಕಟಪಾಡಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಕಟಪಾಡಿಯಲ್ಲಿ ಆಯೋಜಿಸಲಾಗಿದ್ದ ಉಡುಪಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ 2023 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಟಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಸುಗುಣ ಶ ಪೂಜಾರ್ತಿ ಕಾಠ್ಯಕ್ರಮ ಉದ್ಘಾಟಿಸಿದರು. ಕಟಪಾಡಿ ಸ ಎಸ್.ವಿ.ಎಸ್. ವಿಧ್ಯಾವರ್ಧಕ ಸಂಘದ ಸಂಚಾಲಕ ಕೆ. ಸತ್ಯೇಂದ್ರ ಪೈ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಾರ್ಯ ಕ್ರಮ ಆಯೋಜಿಸಲು ಅನುವು ಮಾಡಿಕೊಟ್ಟಿದ್ದಕ್ಕೆ ಇಲಾಖೆಗೆ ಕೃತಜ್ಞತೆ ಸಮರ್ಪಿಸಿದರು.
ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಎಸ್.ವಿ.ಎಸ್. ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್, ಕಟಪಾಡಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಡಾ. ದಯಾನಂದ ಪೈ, ಕಟಪಾಡಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ದೇವೇಂದ್ರ ನಾಯಕ್, ಕಟಪಾಡಿ ಎಸ್.ವಿ.ಎಸ್. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಏಕನಾಥ ಭಟ್, ಉಪಯೋಜನಾ ಸಮನ್ವಯಾಧಿಕಾರಿ ರೂಪರೇಖಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾಪು ವಲಯ ಅಧಿ ಕಾರಿಗಳಾದ ರಿತೇಶ್ ಕುಮಾರ್ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಉμÁಕಿರಣ, ಉಡುಪಿ ವಲಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ್ ನಾಯಕ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ವಲಯದ ಅಧ್ಯಕ್ಷ ಸತ್ಯಸಾಯಿ ಪ್ರಸಾದ್, ಉಡುಪಿ ವಲಯ ಟಿ.ಪಿ.ಇ.ಓ ಚಂದ್ರಶೇಖರ್ ಸುವರ್ಣ, ಶಿಕ್ಷಕ- ರಕ್ಷಕ ಸಂಘ ಹಾಗೂ ನಾನಾ ಶಿಕ್ಷಕ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ದೇವೇಂದ್ರ ನಾಯಕ್ ವಂದಿಸಿದರು. ಶಿವರಾಮ ಶೆಟ್ಟಿ, ಉಮಾ ಶರ್ಮ ಹಾಗೂ ಧೀರಜ್ ಬೆಳ್ಳಾರೆ ಕಾಠ್ಯಕ್ರಮ ನಿರೂಪಿಸಿದರು.