Sunday, November 24, 2024
ಸುದ್ದಿ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ “Aeternus 2k23” ಸ್ಪರ್ಧೆಯ ಉದ್ಘಾಟನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “Aeternus2k23” ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಅಂತರ ಕಾಲೇಜ್ ಪಿಯು ವಿಭಾಗದ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಸಂತ ಫಿಲೋಮಿನಾ ಪಿಯು ಕಾಲೇಜ್ ನ ಪ್ರಾಂಶುಪಾಲರಾದ ರೆI ಫಾದರ್ ಅಶೋಕ್ ರಾಯನ್ ಕ್ರಾಸ್ಟ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿಪರ , ಕೋರ್ಸ್ ಗಳಿಗೆ ಇರುವಂತಹ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಆಗುವಂತೆ ವಿವರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಮಾರಿ ಪ್ರಕೃತಿ ಪ್ರಾರ್ಥಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಶ್ರೀ ಅರ್ಪಿತ್ ಟಿ ಎ ಸ್ವಾಗತಿಸಿ ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ರಶ್ಮಿ ಕೆ ವಂದಿಸಿದರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ ಪ್ರಾಸ್ತಾವಿಕ ಮಾತನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ, ಉದ್ಘಾಟಕರ ವ್ಯಕ್ತಿ ಪರಿಚಯ ಮಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಭವ್ಯಶ್ರೀ ನಿರೂಪಿಸಿದರು.