Friday, January 24, 2025
ಸುದ್ದಿ

ಕಂಬಳ ಋತುವಿನ ಪ್ರಥಮ ಕಂಬಳಕೂಟ : ಮೈರ , ಬರ್ಕೆಜಾಲುನಲ್ಲಿ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ –ಕಹಳೆ ನ್ಯೂಸ್

ಬಂಟ್ವಾಳ : ಕಂಬಳ ಋತುವಿನ ಮೊದಲ ಕಂಬಳ ಕೂಟ ಬಂಟ್ವಾಳ ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಅದ್ದೂರಿಯ ಚಾಲನೆ ನೀಡಲಾಯಿತು.

ವೇ.ಮೂ.ರಾಘವೇಂದ್ರ ಭಟ್ ಕೊಡಂಬೆಟ್ಟು ಅವರು ಧಾರ್ಮಿಕ ವಿಧಿ ವಿಧಾನವನ್ನು ನೆರವೇರಿಸಿದರು. ಮಾಜಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಜಗನ್ನಾಥ ಬಂಗೇರ ನಿರ್ಮಲ್ ನರಿಕೊಂಬು ಅವರು ಸತ್ಯ-ಧರ್ಮ ಜೋಡುಕರೆಯನ್ನು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಗತಿಪರ ಕೃಷಿಕ ಚಯಚಂದ್ರ ಬೊಳ್ಮಾರು ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಂಬಳ ಸಮಿತಿ ಅಧ್ಯಕ್ಷ ಕುಸುಮಾಧರ ಉರ್ಕಿ ಅವರು ಸಭಾಧ್ಯಕ್ಷತೆ ವಹಿಸಿದ್ದರು.

ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ , ಜಿಲ್ಲಾ ಕಂಬಳ ಸಮಿತಿ ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ, ಪ್ರಗತಿಪರ ಕೃಷಿಕ ಉಳಿ ದಾಮೋದರ ನಾಯಕ್,ಮುಂಬಯಿ ಉದ್ಯಮಿ ನಾರಾಯಣ ಶೆಟ್ಟಿ ಕಕ್ಯ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಡಾ. ರಾಜಾರಾಮ ಕೋಂಗುಜೆ, ಪ್ರಮುಖರಾದ ಸಂಜೀವ ಪೂಜಾರಿ ಕಟ್ಟದಡೆ, ಉಳಿ ಗ್ರಾ.ಪಂ.ಉಪಾಧ್ಯಕ್ಷ ವಸಂತ ಸಾಲ್ಯಾನ್ ರಾಮನಗರ, ಮಾಜಿ ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ, ರವಿ ಶೆಟ್ಟಿ ಬೋಳ್ಯ. ಕೃಷ್ಣಪ್ಪ ಗೌಡ ಬರ್ಕೆಜಾಲು, ತನಿಯಪ್ಪ ಗೌಡ ಪೆಂರ್ಗಾಲು, ಮೋನಪ್ಪ ಸಾಲ್ಯಾನ್, ಪ್ರವೀಣ್ ಶೆಟ್ಟಿ ಕಿಂಜಾಲು, ನಾರಾಯಣ ಪೂಜಾರಿ ಬೊಳ್ಳುಕಲ್ಲು, ಸುಧಾಕರ ಶೆಟ್ಟಿ ಶಂಕರಬೆಟ್ಟು,ಗೋಪಾಲ ಶೆಟ್ಟಿ, ಜಗದೀಶ ಶೆಟ್ಟಿ ಬೋಳದಗುತ್ತು, ಲೋಕೇಶ್ ಶೆಟ್ಟಿ ಮುಚ್ಚೂರು, ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ತುಷಾರ್ ಭಂಡಾರಿ, ಲತೀಶ್ ಕುಕ್ಕಾಜೆ, ಪದಾಽಕಾರಿಗಳಾದ ಸುರೇಶ್ ಮೈರ, ಶಾಂತಪ್ಪ ಪೂಜಾರಿ ಹಟದಡ್ಕ, ಉಮೇಶ್ ಪೂಜಾರಿ,ಪುರುಷೋತ್ತಮ ಪೂಜಾರಿ ಪಲ್ಕೆ, ರಂಜಿತ್ ಮೈರಾ,ಕುಶಲ ಮೈರ, ರವೀಂದ್ರ ಅಡಪ ದಿಡಿಂಬಿಲ , ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಸುರೇಂದ್ರ ಪೂಜಾರಿ ಕಂಚಲಪಲ್ಕೆ, ವಸಂತ ಪೂಜಾರಿ ಡೆಚ್ಚಾರು, ಚೇತನ್ ಊರ್ದೊಟ್ಟು , ಸತೀಶ್ ಹೊಸ್ಮಾರು, ಪ್ರಕಾಶ್ ಕರ್ಲ, ಮೊದಲಾದವರಿದ್ದರು. ಶಿವಾನಂದ ಮೈರಾ ಪ್ರಸ್ತಾವಿಸಿ, ಸ್ವಾಗತಿಸಿದರು.ಪ್ರಶಾಂತ್ ಮೈರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.