ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಯುವಜನರಿಗೆ ಗುಡ್ ನ್ಯೂಸ್ ; ‘ಉದ್ಯಮಶೀಲತೆ’ ತರಬೇತಿಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್
ರಾಜ್ಯ ಸರ್ಕಾರವು `SC-ST’ ವರ್ಗದ ಯುವಜನತೆಗೆ ಸಿಹಿಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಜನ ರಿಗೆ ಉದ್ಯಮಶೀಲ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕಅರ್ಜಿಗಳನ್ನು ಸಲ್ಲಿಸಬಹುದು.
ಈ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 21 ರಿಂದ 50 ಮತ್ತು ಶೈಕ್ಷಣಿಕ ಅರ್ಹತೆ ಪಿ.ಯು.ಸಿ ಮತ್ತು ಮೇಲ್ಮಟ್ಟು ಇರಬೇಕಾಗುತ್ತದೆ.
ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ.ಸರ್ಕಾರದ ವಿವಿಧ ಇಲಾಖೆಗಳಿಂದ ಪ.ಜಾತಿ/ ಪ.ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು.ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿAದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುವುದು.
ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ತರಬೇತಿಗೆ ಹಾಜರಾಗಲುಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನದ ತಗಲುವ ಖರ್ಚುನ್ನು ಸರ್ಕಾರವೇ ಬರಿಸುತ್ತದೆ.