Sunday, January 19, 2025
ಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನ.26ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬೃಹತ್ ಹಿಂದು ಸಂಗಮ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ : ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನ.26ರಂದು  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬೃಹತ್ ಹಿಂದು ಸಂಗಮ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಮಹೇಂದ್ರ ವರ್ಮ ಪಡ್ಪು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮವನ್ನು ಹಿಂದು ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾರ್ಯಕ್ರಮದಲ್ಲಿ ಗುರುಪುರ ಶ್ರೀಕ್ಷೇತ್ರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದು, ಕಾರ್ಕಳದ ಉಪನ್ಯಾಸಕರಾದ ಆದರ್ಶ ಗೋಖಲೆ ಅವರು ದಿಕ್ಸೂಚಿ ಭಾಷಣ ನೀಡಲಿದ್ದಾರೆ. ಉಪ್ಪಿನಂಗಡಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿಯ ಗೌರವಾಧ್ಯಕ್ಷರಾದ ಡಿ. ಚಂದಪ್ಪ ಮೂಲ್ಯ, ಪುತ್ತೂರು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಬೆಂಗಳೂರಿನ ಉದ್ಯಮಿಗಳಾದ ಡಿ. ಕಿರಣ್ ಚಂದ್ರ, ನಟೇಶ್ ಪೂಜಾರಿ, 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಉಪಾಧ್ಯಕ್ಷರಾದ ಶ್ರೀಮತಿ ಸ್ವಪ್ನ ದೇವನ್, ಕೋಡಿಂಬಾಡಿ ಗ್ರಾಮ ಪಂಚಾಯತ್ ನ ನಿಕಟಪೂರ್ವ ಉಪಾಧ್ಯಕ್ಷರಾದ ಶ್ರೀಮತಿ ಉಷಾ ಲಕ್ಷ್ಮಣ್ ಬೆಳ್ಳಿಪ್ಪಾಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು