Tuesday, November 26, 2024
ಸುದ್ದಿ

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ಕಡ್ಡಾಯ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಾಕೀತು – ಕಹಳೆ ನ್ಯೂಸ್

ಬೆಂಗಳೂರು : ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ವ್ಯವಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದ್ದು, ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬAಧಪಟ್ಟAತೆ ಅಧಿಕಾರಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಡೀ ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧಕ್ಕೆ ಸಂಬAಧಪಟ್ಟAತೆ ತಾಲೂಕು ಆಡಳಿತ ಜವಾಬ್ದಾರಿ ಹೆಚ್ಚಿದ್ದು, ಬಾಲ್ಯ ವಿವಾಹ ನಿಷೇಧಕ್ಕೆ ಕ್ರಿಯಾಯೋಜನೆ ರೂಪಿಸಬೇಕು. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಕಂಡುಬರುತ್ತಿದ್ದು, ಈ ನಿಟ್ಟಿನಲ್ಲಿ ಬಾಲ್ಯ ವಿವಾಹ ತಡೆಗೆ ತಹಸೀಲ್ದಾರ್ ಹಾಗೂ ತಾಪಂ ಇಒಗಳು ಕ್ರಿಯಾ ಯೋಜನೆ ರೂಪಿಸಿಬೇಕು. ಸರ್ಕಾರದ ಎಲ್ಲ ಹಂತದ ಅಧಿಕಾರಿಗಳು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಹಸೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ತಾಲೂಕು ಹಂತದಲ್ಲಿ ಮಕ್ಕಳ ರಕ್ಷಣೆಗೆ ಕ್ರಮವಹಿಸಬೇಕು. ತಹಸೀಲ್ದಾರ್‌ಅಧ್ಯಕ್ಷತೆಯಲ್ಲಿ ತಾಲೂಕು ಹಂತದಲ್ಲಿ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ವ್ಯವಸ್ಥೆಗೆ ಸಂಬAಧಪಟ್ಟAತೆ ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿ ಸೇರಿದಂತೆ ಹಲವಾರು ಸಮಿತಿಗಳಿದ್ದು, ತಾಲೂಕು ಅಭಿವೃದ್ಧಿ ಯೋಜನಾಧಿಕಾರಿಗಳು ಸಮಿತಿಗಳ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ತಹಸೀಲ್ದಾರ್‌ ನೇತೃತ್ವದಲ್ಲಿ – ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು. ತಾಲೂಕು ಹಂತದ ಮಕ್ಕಳ ಹಕ್ಕುಗಳ ಹಾಗೂ ರಕ್ಷಣಾ ವ್ಯವಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲೆಯ ಯಾವುದೇ ತಾಲೂಕಿನ ತಹಶೀಲ್ದಾರರು ಬಾರದೇ ಇರುವುದರ ಬಗ್ಗೆ ರಾಜ್ಯ ರಾಜ್ಯ ಮಕ್ಕ ಹಕ್ಕುಗಳ ರಕ್ಷಣಾ ಆಯೋಗದಸದಸ್ಯರು ಅಸಮಾಧಾನವ್ಯಕ್ತಪಡಿಸಿದರು. ಸರ್ಕಾರದಿಂದ ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ನ ಸಂಖ್ಯೆ 1098 ಹಾಗೂ 112 ಆರಂಭಿಸಲಾಗಿದ್ದು, ಶಾಲೆ, ಅಂಗನವಾಡಿ, ವಸತಿ ನಿಲಯ, ಸರ್ಕಾರಿ ಕಟ್ಟಡಗಳು, ಬಸ್ ನಿಲ್ದಾಣಗಳಲ್ಲಿಯೂ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರಚುರ ಪಡಿಸಬೇಕು ಎಂದು ಶ್ರೀ ಆಯೋಗದ ಸದಸ್ಯರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.