Friday, January 24, 2025
ಸುದ್ದಿ

ಡಿ. 01ರಂದು ಸಾಜ ಬಲ್ನಾಡಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ 2023-24 ಮತ್ತು ನೂತನ ಧ್ವಜ ಸ್ತಂಭ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಡಿ.01ರಂದು ಸಾಜ ಬಲ್ನಾಡಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ 2023-24 ಮತ್ತು ನೂತನ ಧ್ವಜ ಸ್ತಂಭ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಎಸ್.ಡಿ.ಎಂ.ಸಿಯ ಅಧ್ಯಕ್ಷರಾದ ಸುಧಾಕರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಪುತ್ತೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ನ ಯೋಜನಾಧಿಕಾರಿ ಶ್ರೀಧರ್ ಎಂ, ಪುತ್ತೂರು ಬಿ.ಆರ್.ಸಿ. ಯ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಎಪಿಎಂಸಿ ಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಭಂಡಾರಿ ಸಾಜ, ಸೌಜನ್ಯ ಯುವಜನ ಸಂಘ (ರಿ.) ಸಾಜದ ಹಮೀದ್ ಸಾಜ, ಗಣೇಶ್ ಭಟ್ ಸುದನಡ್ಕ ಹಾಗೂ ಮತ್ತಿತ್ತರ ಗಣ್ಯರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಲ್ನಾಡ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಭಟ್ ಬಬ್ಬಿಲಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಲ್ನಾಡ್ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ರವಿಚಂದ್ರ ಸಾಜ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಯೂಸೂಫ್ ಗೌಸಿಯಾ ಸಾಜ, ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್. ಹಾಗೂ ಮತ್ತಿತ್ತರರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ವಿದುಷಿ ಕಾವ್ಯ ಭಟ್ ಅವರ ಶಿವಾಂಜಲಿ ಕಲಾಕೇಂದ್ರ (ರಿ.) ಪೆರ್ಲ ಇವರಿಂದ ಭರತನಾಟ್ಯ ಕಾರ್ಯಕ್ರಮ ಹಾಗೂ ರಾತ್ರಿ ವಿಠಲ ನಾಯ್ಕ್ ಕಲ್ಲಡ್ಕ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.