ಎನ್ನೆಂಸಿ ಐಕ್ಯೂಎಸಿ ಮತ್ತು ನೇಚರ್ ಕ್ಲಬ್ ವತಿಯಿಂದ ರಾಷ್ಟೀಯ ಏಕತಾ ಸಪ್ತಾಹದ ಅಂಗವಾಗಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್
ನೆಹರೂ ಮೆಮೋರಿಯಲ್ ಕಾಲೇಜಿನ ಐಕ್ಯೂಎಸಿ ಮತ್ತು ನೇಚರ್ ಕ್ಲಬ್ ವತಿಯಿಂದ ರಾಷ್ಟೀಯ ಏಕತಾ ಸಪ್ತಾಹದ ಅಂಗವಾಗಿ ‘ಪರಿಸರ ಸಂರಕ್ಷಣೆ’ ಕುರಿತಾಗಿ ಮಾಹಿತಿ ಕಾರ್ಯಕ್ರಮ ನ.25 ರಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.
ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ದೀಪಶ್ರೀ ಕೆ ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮ ಹೊಣೆ, ಎಲ್ಲರೂ ಜವಾಬ್ದಾರಿಯಿಂದ ಸ್ವಚ್ಛತೆ, ಮಾಲಿನ್ಯ ತಡೆ, ಪ್ಲಾಸ್ಟಿಕ್ ತ್ಯಜಿಸುವುದು ಇನ್ನಿತರ ಅಗತ್ಯ ವಿಚಾರಗಳಲ್ಲಿ ಸ್ವಾರ್ಥ ಬಿಟ್ಟು ಮನಪೂರ್ವಕವಾಗಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ಪರಿಸರ ವ್ಯವಸ್ಥೆಯನ್ನು ಮುಂದಿನ ಜನಾಂಗಕ್ಕೆ ಉಳಿಯುವಂತೆ ಮಾಡಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಐಕ್ಯೂಎಸಿ ಸಂಯೋಜಕಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಮತಾ ಕೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಇಂಗ್ಲಿಷ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಭವ್ಯ ಪಿ ಎಮ್ ಉಪಸ್ಥಿತರಿದ್ದರು. ಅಂತಿಮ ಜೀವವಿಜ್ಞಾನ ಪದವಿಯ ಲಿಖಿತಾ ಮತ್ತು ತಂಡ ಪ್ರಾರ್ಥಿಸಿ, ನೇಚರ್ ಕ್ಲಬ್ ಕಾರ್ಯದರ್ಶಿ ಪವಿತ್ರಾಕ್ಷಿ ಸ್ವಾಗತಿಸಿದರು. ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಚಿತ್ರ ಅತಿಥಿಗಳನ್ನು ಪರಿಚಯಿಸಿ, ಕಾಲೇಜಿನ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಯಶಿಕಾ ಜಿ ಪಿ ವಂದಿಸಿದರು. ಮಹಿಮಾ ಪಿ ಕೆ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಜೀವವಿಜ್ಞಾನ ವಿಭಾಗದ ಉಪನ್ಯಾಸಕರು, ಬೋಧಕೇತರ ವೃಂದದವರು, ಕಲಾ ಪದವಿ ಮತ್ತು ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು.