Tuesday, January 21, 2025
ಸುದ್ದಿ

‘ಕಾಂತಾರ’ ಚಿತ್ರಕ್ಕೆ ಮಹೂರ್ತ ; ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ – ಕಹಳೆ ನ್ಯೂಸ್

ಉಡುಪಿ : ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆಯುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.

ಕಾಂತಾರ ಸಿನಿಮಾ ಟೀಮ್ ನಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಫಸ್ಟ್ ಲುಕ್ ಗಾಗಿ ಮಾಡಿದ ಪೋಸ್ಟರ್ ನಲ್ಲಿ ಇದು ಬರಿ ಬೆಳಕಲ್ಲ, ದರ್ಶನ ಎಂದು ಟ್ಯಾಗ್ ಲೈನ್ ಕೊಡುವ ಮೂಲಕ    ಕುತೂಹಲ ಮೂಡಿಸಿದ್ದಾರೆ.