Monday, January 20, 2025
ಸುದ್ದಿ

ಕುಸಿದು ಬಿದ್ದ ನರ್ಸರಿ ಶಾಲೆ ಕಟ್ಟಡ : ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕಟ್ಟಡ ಬಿದ್ದಿದ್ದು, ಪರಿಣಾಮ ಕಟ್ಟಡದ ಅವಶೇಷದಡಿ ವಾಹನಗಳು ಸಂಪೂರ್ಣ ಜಖಂ ಆಗಿವೆ. ಅದೃಷ್ಟವಶಾತ್ ಮಕ್ಕಳು ಶಾಲೆಯಲ್ಲಿ ಇಲ್ಲದ ವೇಳೆ ಕಟ್ಟಡ ಬಿದ್ದಿದ್ದು, ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

ನರ್ಸರಿ ಶಾಲೆಯಲ್ಲಿ ಸುಮಾರು 80 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು