Monday, January 20, 2025
ಸುದ್ದಿ

ಬೆಳ್ತಂಗಡಿ : ಕಾರಿನ ಮೇಲೆ ದಾಳಿ ಮಾಡಿದ ಒಂಟಿ ಸಲಗ : ಕಾರು ಜಖಂ : ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಒಂಟಿ ಸಲಗವು ಕಾರಿಗೆ ಹಾನಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ನಡೆದಿದೆ. ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು.ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದೆ. ಇವರಿಗೆ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಾರಿನಲ್ಲಿ ಮಗು ಸಹಿತ ಏಳು ಮಂದಿ ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನು ತಿಳಿದಿದ್ದ ಸ್ಥಳೀಯರು ಆಗ ಆ ದಾರಿಯಾಗಿ ಬಂದ ಕಾರನ್ನು ಮುನ್ನೆಚ್ಚರಿಕೆ ದೃಷ್ಟಿಯಿಂದ ನಿಲ್ಲಿಸುವಂತೆ ಸೂಚಿಸಿದರು. ಕಾರನ್ನು ಕಟ್ಟಡವೊಂದರ ಬದಿ ನಿಲ್ಲಿಸುವಷ್ಟರಲ್ಲಿ ಆನೆ ಅದೇ ಪರಿಸರಕ್ಕೆ ಆಗಮಿಸಿತ್ತು. ಕಾರಿನಲ್ಲಿದ್ದ ಕೆಲವರು ಅಷ್ಟರಲ್ಲಿ ಕೆಳಗೆ ಇಳಿದು ಪಕ್ಕದ ಮನೆಯಲ್ಲಿ ರಕ್ಷಣೆ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆನೆಯು ದಾಡೆಯ ಮೂಲಕ ಕಾರನ್ನು ಕಟ್ಟಡದ ಗೋಡೆಗೆ ಗುದ್ದಿ ಜಖಂಗೊಳಿಸಿ ಅನಂತರ ಅಲ್ಲಿಂದ ಮನೆಯ ಕಾಂಪೌಂಡ್‍ಗೆ ನುಗ್ಗಿ ಅಲ್ಲಿಂದ ತೋಟಕ್ಕೆ ಹೋಗಿದೆ. ಬಳಿಕ ಸಮೀಪದ ಪರಿಸರದಲ್ಲಿ ಕಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.