Recent Posts

Sunday, January 19, 2025
ಸುದ್ದಿ

ನ.29ರಂದು ಉಡುಪಿ ಅಜ್ಜರಕಾಡಿನಲ್ಲಿ ಜೀವ ರಕ್ಷಕ ತೆರಬೇತಿಗೆ ಆಯ್ಕೆ ಪ್ರಕ್ರಿಯೆ – ಕಹಳೆ ನ್ಯೂಸ್ 

ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲು ಉದ್ದೇಶಿಸಲಾಗಿದ್ದು, ಪ್ರವಾಸೋದ್ಯಮ ಇಲಾಖೆಯ ವತಿಯಿಂದ 20 ಜನರಿಗೆ ಜೀವ ರಕ್ಷಕ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸಲಾಗುವುದು.

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮುಂಚಿತವಾಗಿ ನ.29ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಆಸಕ್ತ ಕನಿಷ್ಟ 18ರಿಂದ 45 ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ, 1 ಕಿ.ಮೀ. ಓಟ ಮತ್ತು 400 ಮೀ. ಈಜಲು ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ನ.29ರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ಒಳಗೆ ಹಾಜರಾಗಿ ನೊಂದಾಯಿಸಿಕೊಂಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿ ಕಾರಿಗಳ ಕಚೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 303, ಮಣಿಪಾಲ, 0820-2574868 ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು