Recent Posts

Monday, January 20, 2025
ಸುದ್ದಿ

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಹಲವು ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ, ಪುತ್ತೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಭಾಗವಹಿಸಿದ್ದು, ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಜನಪದಗೀತೆ ಸ್ಪರ್ಧೆಯಲ್ಲಿ ರೇಷ್ಮಾ.ಟಿ ದ್ವಿತೀಯ ಸ್ಥಾನ, ಪ್ರೌಢಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ರೇಖಾ ಆಚಾರ್ಯ ದ್ವಿತೀಯ ಸ್ಥಾನ, ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸೌಮ್ಯಕುಮಾರಿ ತೃತೀಯ ಸ್ಥಾನ, ಮತ್ತು ಪ್ರಾಥಮಿಕ ಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ಅಕ್ಷತಾ.ಜಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.