Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿ‌ ಚಿಕ್ಕಮಗಳೂರಿನ‌ ಯುವತಿಯೊಂದಿಗೆ‌ ಅಸಭ್ಯ ರೀತಿಯಲ್ಲಿ ಸುತ್ತಾಡುತ್ತಿದ್ದ ಮಂಕಿಸ್ಟ್ಯಾಂಡ್‌ ನ ಅನ್ಯಕೋಮಿನ ಯುವಕ ; ಬಜರಂಗದಳ ಕಾರ್ಯಕರ್ತರಿಂದ ತರಾಟೆ – ಮಾತಿನ ಚಕಮಕಿ, ಅನ್ಯಕೋಮಿನ ಜೋಡಿ ಪೊಲೀಸ್‌ ವಶಕ್ಕೆ – ನೈತಿಕ ಪೊಲೀಸ್‌ಗಿರಿಗೆ ಯತ್ನಿಸಿದ ಆರೋಪ ಬಜರಂಗದಳ ಕಾರ್ಯಕರ್ತರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಅಸಭ್ಯ ರೀತಿಯಲ್ಲಿ ಒಟ್ಟಿಗೆ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕ ಹಾಗೂ ಯುವತಿಯನ್ನು ಬೆನ್ನಟ್ಟಿ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿ‌ ಈ ಘಟನೆ ನಡೆದಿದೆ. ಮಂಗಳೂರಿನ ಮಂಕಿಸ್ಟ್ಯಾಂಡ್‌ ನಿವಾಸಿ ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದಳು. ಮಂಕಿಸ್ಟೆಂಡ್‌ನ ಮಳಿಗೆಯೊಂದರಲ್ಲಿ ಈ ಜೋಡಿ ಉದ್ಯೋಗದಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಕೂಟರ್‌ನಲ್ಲಿ ಜೋಡಿ ಸುತ್ತಾಟ ಗಮನಿಸಿ ಬಜರಂಗದಳ ಕಾರ್ಯಕರ್ತರು ಬೈಕ್‌ನಲ್ಲಿ ಬೆನ್ನಟ್ಟಿದ್ದಾರೆ. ಮಂಕಿಸ್ಟ್ಯಾಂಡ್‌ ಬಳಿ ಸ್ಕೂಟರ್ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಎರಡೂ ಕೋಮಿನ ಯುವಕರ ತಂಡ ಸ್ಥಳದಲ್ಲಿ ಜಮಾಯಿಸಿದ್ದು, ಮಾತಿನ ಚಕಮಕಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಸ್ಥಿತಿ ವಿಕೋಪಕ್ಕೆ ತಿರುಗುವಷ್ಟರಲ್ಲಿ ಪಾಂಡೇಶ್ವರ ಠಾಣೆಯ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಗುಂಪು ಚದುರಿಸಿ ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ್ ರಾವ್ ಹಾಗೂ ಶಿಬಿನ್ ಪಡಿಕಲ್ ಎಂಬಿಬ್ಬರನ್ನು ಪಾಂಡೇಶ್ವರ ಪೊಲೀಸರಿಂದ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.