Recent Posts

Monday, January 20, 2025
ಸುದ್ದಿ

ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಲ್ಲಿ ಇಂದು ಮತದಾನ – ಕಹಳೆ ನ್ಯೂಸ್

ಬಿಆರ್ ಎಸ್-ಕಾಂಗ್ರೆಸ್ ಬಿಜೆಪಿ ನಡುವೆ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ತೆಲಂಗಾಣ ವಿಧಾನಸಭೆಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ಪಂಚರಾಜ್ಯಗಳ ಚುನಾವಣೆಗೆ ಇದೇ ದಿನವೇ ಅಂತಿಮ ತೆರೆ ಬೀಳಲಿದೆ.

ತೆಲಂಗಾಣದಲ್ಲಿ 119 ಕ್ಷೇತ್ರಗಳಿವೆ. ಒಟ್ಟು 2290 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3.13 ಕೋಟಿ ಮತರಾದರಿದ್ದಾರೆ. ರಾಜ್ಯದಲ್ಲಿ ಹಾಲಿ ಬಿಆರ್ ಎಸ್ ಸರ್ಕಾರವಿದ್ದು, ಅದನ್ನು ಮಡಿಸಿ, ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯ ಗತಾಯ ಯತ್ನ ನಡೆಸಿದೆ. ಬಿಜೆಪಿ ಕೂಡ ಹಿಂದೆಂದಿಗಿಂತ ಹೆಚ್ಚು ಬಲದೊಂದಿಗೆ ಸ್ಪರ್ಧೆಗೆ ಇಳಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಏಕ ಹಂತದಲ್ಲಿ 119 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಮತದಾನ ಮುಕ್ತಾಯಗೊಂಡ ನಂತ್ರ, ಸಂಜೆ ಎಕ್ಸಿಟ್ ಪೋಲ್ ಫಲಿತಾಂಶ ಹೊರ ಬೀಳಲಿದೆ. ಯಾವ ಪಕ್ಷ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ ಸ್ಪಷ್ಟವಾಗೋ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು