Recent Posts

Sunday, January 19, 2025
ಕ್ರೈಮ್ರಾಷ್ಟ್ರೀಯಸುದ್ದಿ

ಬರ್ತ್​ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂದು ಗಂಡನನ್ನೇ ಕೊಂದ ಪತ್ನಿ! – ಕಹಳೆ ನ್ಯೂಸ್

ವದೆಹಲಿ: ತನ್ನ ಬರ್ತ್​ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂದು ಗಂಡನನ್ನೇ ಹೆಂಡತಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದ್ದು, ನಿಖಿಲ್ ಖನ್ನಾ (36) ಕೊಲೆಯಾದ ವ್ಯಕ್ತಿ. 38 ವರ್ಷದ ರೇಣುಕಾ ಪತಿಯನ್ನೇ ಕೊಲೆ ಮಾಡಿರುವ ಆರೋಪಿ.

ಪುಣೆಯ ವನವಾಡಿಯಲ್ಲಿರುವ ಪೋಶ್​ ರೆಸಿಡೆನ್ಶಿಯಲ್ ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಖನ್ನಾರ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಅವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಟ್ಟಡ ನಿರ್ಮಾಣ ಉದ್ಯಮಿಯಾಗಿದ್ದ ನಿಖಿಲ್ ಖನ್ನಾ ಮತ್ತು ರೇಣುಕಾ 6 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ತನ್ನ ಹುಟ್ಟುಹಬ್ಬದ ಆಚರಣೆಗೆ ದುಬೈಗೆ ಕರೆದುಕೊಂಡು ಹೋಗುವಂತೆ ನಿಖಿಲ್‍ಗೆ ಪತ್ನಿ ಹೇಳಿದ್ದಾಳೆ. ಸಂಬಂಧಿಕರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಕರೆದರೂ ನಿಖಿಲ್ ಹೋಗಿರಲಿಲ್ಲವಂತೆ. ಇದಲ್ಲದೆ ಮದುವೆ ವಾರ್ಷಿಕೋತ್ಸವದ ವೇಳೆ ರೇಣುಕಾ ದುಬಾರಿ ಉಡುಗೊರೆಯನ್ನು ನಿರೀಕ್ಷಿಸಿದ್ದಳಂತೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ರೇಣುಕಾಳ ಆಸೆಗಳಿಗೆ ನಿಖಿಲ್ ಸೊಪ್ಪು ಹಾಕಿರಲಿಲ್ಲವಂತೆ. ಪದೇ ಪದೇ ಗಂಡನಿಂದ ನಿರಾಸೆ ಅನುಭವಿಸಿದ ರೇಣುಕಾಳಿಗೆ ಪತಿ ಮೇಲೆ ವಿಪರಿತ ಕೋಪ ಬಂದಿತ್ತು. ಹೀಗಾಗಿ ಇಬ್ಬರ ನಡುವೆ ಹಲವಾರು ಬಾರಿ ಜಗಳವೂ ನಡೆದಿತ್ತು ಎನ್ನಲಾಗಿದೆ. ಶುಕ್ರವಾರ(ನ.24) ಇಬ್ಬರ ನಡುವಿನ ಜಗಳ ತಾರಕಕ್ಕೇರಿ ತಾಳ್ಮೆ ಕಳೆದುಕೊಂಡ ರೇಣುಕಾ ಪತಿಯ ಮೂಗಿಗೆ ಬಲವಾಗಿ ಗುದ್ದಿದ್ದಾಳೆ. ಪರಿಣಾಮ ಆತನ ಹಲ್ಲುಗಳು ಮುರಿದು, ಮೂಗಿನಲ್ಲಿ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವನವಾಡಿ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ಕೈಗೊಳ್ಳಲಾಗಿದೆ. ಸದ್ಯ ರೇಣುಕಾರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರಡಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.