Monday, November 25, 2024
ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ 2023” ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.ಈ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿ ಸಾಗಿಸಬೇಕು“ ಎಂದು ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಮಾಲ ವಿ.ಎನ್. ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2023 ನ್ನು ಉದ್ಘಾಟಿಸಿ,  ಮಾತನಾಡಿದ ಅವರು “ಪ್ರತೀ ವ್ಯಕ್ತಿಯು ತನ್ನಲ್ಲಿರುವ ಪ್ರತಿಭೆಯನ್ನು ಪೂರ್ಣ ಪ್ರಮಾಣದಲ್ಲಿ ವಿನಿಯೋಗಿಸಬೇಕಾಗುತ್ತದೆ.ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪೂರಕವಾದ ವೇದಿಕೆ ಇಂತಹ ಕಾರ್ಯಾಗಾರಗಳಿಂದ ದೊರೆಯುತ್ತದೆ.ಪಠ್ಯ ಚಟುವಟಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗುವುದರಿಂದ ಅವರ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗುತ್ತದೆ . ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸಂಪತ್ ಕುಮಾರ್ ರವರು ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಮುಂದಿನ ಭವಿಷ್ಯಕ್ಕಾಗಿ ಜೀವನದ ಮೌಲ್ಯಗಳ ಮಹತ್ವವನ್ನು ಅರಿತುಕೊಂಡರೆ ಮೌಲ್ಯಾಧಾರಿತ ಜೀವನ ನಡೆಸಲು ಸಾಧ್ಯವಾಗುತ್ತದೆ.ಇದರ ಜತೆಯಲ್ಲಿ ತನ್ನ ಭವಿಷ್ಯದ ಬಗ್ಗೆ ಮನಸಿನಲ್ಲಿ ಗುರಿಯನ್ನಿಟ್ಟುಕೊಂಡು ಆಶಾವಾದಿಗಳಾಗಬೇಕು ಎಂದು ಹೇಳಿದರು.

ಈ ಕಾರ್ಯಾಗಾರದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ, ಸಮಯ ಪರಿಪಾಲನೆ,ಒತ್ತಡ ನಿವಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಅವಧಿಯನ್ನು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು.ಈ ಕಾರ್ಯಾಗಾರಕ್ಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕೃತಿಕ್ ಸ್ವಾಗತಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಗುರುದೀಪ್ ವಂದಿಸಿದರು.