Friday, January 24, 2025
ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ 2023”- ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2023 ನ್ನು ಪುತ್ತೂರಿನ ಸುದಾನ ವಸತಿ ಶಾಲೆಯ ಕಾರ್ಯದರ್ಶಿಗಳಾದ ಪೀಟರ್ ವಿಲ್ಸನ್ ಪ್ರಭಾಕರ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ.ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ.ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ.ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ, ಹಾಗೂ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನಾಂಗವು ಅತ್ಯಾಧುನಿಕ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರಬೇಕು ಹಾಗೂ ತನ್ನಲ್ಲಿರುವ ದೌರ್ಬಲ್ಯವನ್ನು ಅರಿತುಕೊಂಡು ಶಕ್ತಿ ಸಾಮಥ್ರ್ಯವನ್ನು ವೃದ್ಧಿಸಿಕೊಳ್ಳಬೇಕು.ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ ರವರು ಮಾತನಾಡುತ್ತಾ, ವ್ಯಕ್ತಿ ಬದುಕನ್ನು ರೂಪಿಸುವುದರಲ್ಲಿ ಶಿಕ್ಷಣಕ್ಕೆ ಪ್ರಮುಖ ಪಾತ್ರವಿದೆ. ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕಾರ್ಯಾಗಾರಗಳ ಅವಶ್ಯಕತೆಯಿದೆ.ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ. ಎಂದು ಹೇಳಿದರು.

ನಂತರ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ 10ನೇ ತರಗತಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು.

ಸಮಯ ಪರಿಪಾಲನೆ, ಒತ್ತಡ ನಿವಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಆಡಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.