Monday, November 25, 2024
ಸುದ್ದಿ

ಡಿ.3 ರಂದು ಅಕ್ಷಯ ಫೌಂಡೇಶನ್ ವತಿಯಿಂದ ಕೇಂದ್ರಿಕೃತ ಹೈಟೆಕ್ ಅಡುಗೆ ಮನೆಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬೆಂಜನಪದವಿನಲ್ಲಿ ಡಿ.3 ರಂದು ಅಕ್ಷಯ ಫೌಂಡೇಶನ್ ವತಿಯಿಂದ ಕೇಂದ್ರಿಕೃತ ಹೈಟೆಕ್ ಅಡುಗೆ ಮನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳೂರು ಫೌಂಡೇಶನ್ ಅಧ್ಯಕ್ಷ ಗುಣಕರ ರಾಮ್ ದಾಸ ತಿಳಿಸಿದರು.

ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಕ್ಕಳ ಹಸಿವು ನೀಗಿಸುವಲ್ಲಿ ಮಹತ್ವದ ಮೈಲಿಗಲ್ಲು ಆಗಿರುವ ಅಕ್ಷಯ ಪಾತ್ರ ಫೌಂಡೇಶನ್, ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದೆ. ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‍ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಶ್ರೀ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಗೌರವಾನ್ವಿತ ಅತಿಥಿಗಳಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಂಗಳೂರು ಇವರು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‍ನ ಅಧ್ಯಕ್ಷರಾದ ಡಾ. ಪಿ ದಯಾನಂದ ಪೈ, ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ಸಿ.ಇ.ಒ ಡಾ. ಆನಂದ ಕೆ, ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯವಿರಲಿದೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‍ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಸೌರಶಕ್ತಿ ಮತ್ತು ಸ್ವಚ್ಛ LPG ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಚೇತನ್, ನವೀನ್ ಉಪಸ್ಥಿತರಿದ್ದರು.