Thursday, January 23, 2025
ಸುದ್ದಿ

ಬಂದಾರು : 2023-24ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕವನ ವಾಚನ ಸ್ಪರ್ಧೆಯಲ್ಲಿ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು| ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಬಂದಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ(ಆಡಳಿತ) ಕಚೇರಿ ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರುನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಗಳ ಪುತ್ರಿ, ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9ನೇತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ. ಖಂಡಿಗ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು