ಪಂಚ ರಾಜ್ಯಗಳ ಚುನಾವಣ ಫಲಿತಾಂಶ : ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನತ್ತ..! ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ.. !!- ಕಹಳೆ ನ್ಯೂಸ್
ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ ಎಣಿಕೆ ನಡೆಯುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆಯಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಮುನ್ನಡೆಯುತ್ತಿದೆ.
ಮಧ್ಯಪ್ರದೇಶದ ಟ್ರೆಂಡ್‌ಗಳಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗುತ್ತಿದೆ. ಬಿಜೆಪಿ 160 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 67 ಸ್ಥಾನಗಳಲ್ಲಿ ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ 29, ಬಿಜೆಪಿ 6 ಮತ್ತು ಸಿಪಿಐ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದ ಪಟಾನ್ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಭೂಪೇಶ್ ಬಘೇಲ್ ಮುನ್ನಡೆ ಸಾಧಿಸಿದ್ದಾರೆ.