Wednesday, January 22, 2025
ಸುದ್ದಿ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಕೆ.ಉದಯ ಕುಮಾರ್ ಶೆಟ್ಟಿ- ಕಹಳೆ ನ್ಯೂಸ್

ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢದಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿಸಲ್ಪಟ್ಟ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನೇತೃತ್ವದಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವನ್ನು ದಾಖಲಿಸಿ ಮಗದೊಮ್ಮೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು