Wednesday, January 22, 2025
ಸುದ್ದಿ

ಮೂಡುಬಿದಿರೆ : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿರಾಟ್ ಕೃಷ್ಣನಿಗೆ ಬಹುಮಾನ – ಕಹಳೆ ನ್ಯೂಸ್

ಮೂಡುಬಿದಿರೆ : ಪುತ್ತಿಗೆ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಮಂಗಳೂರಿನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹನುಮಂತ ಮತ್ತು ಭೀಮರ ಸಮಾಗಮದ ಸನ್ನಿವೇಶದ ನಿರೂಪಣೆಗೆ ಪುತ್ತಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಮೂಡುಬಿದಿರೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನಿಯಾಗಿ ಜಿಲ್ಲೆಗೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಕೆನರಾ ಕಲ್ಚರಲ್ ಅಕಾಡೆಮಿ ಮತ್ತು ಸಿಟಿಸೆಂಟರ್ ಪ್ರಸ್ತುತಿಯ ಜಿಲ್ಲಾ ಮಟ್ಟದ ‘ನವರಸಂ’ ಕಾರ್ಯಕ್ರಮದಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿರುತ್ತಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು