Wednesday, January 22, 2025
ಸುದ್ದಿ

ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡದಲ್ಲಿ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

2023 ರ ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ ಈ ಮೂರು ರಾಜ್ಯಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಜಯಗಳಿಸಿದ್ದು, ಆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಾರುಕಟ್ಟೆ ಬಳಿ  ಹಮ್ಮಿಕೊಳ್ಳಲಾದ “ವಿಜಯೋತ್ಸವ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರು ಮಾತನಾಡಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಈ ಮೂರು ರಾಜ್ಯಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷ ಜಯಭೇರಿ ಗಳಿಸಿದೆ. ಇದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರೀ ಜೆ. ಪಿ. ನಡ್ಡಾ ಮತ್ತು ಶ್ರೀ ಅಮಿತ್‌ ಶಾ ಅವರಿಗೆ ಅಭಿನಂದನೆಗಳು ಮತ್ತು ಬೂತ್‌ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ತಿಳಿಸಿ ಅವರು ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ.