Thursday, January 23, 2025
ಸುದ್ದಿ

“ಮತ್ತೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ” : ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಈ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ನಡ್ಡಾಜಿ, ಮೋದಿಜಿ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ನಾಯಕರುಗಳಿಗೂ ಹೃತ್ಪೂರ್ವಕ ಅಭಿನಂದನೆಗಳು. ಇನ್ನು ಮೇಲೆ ದೇಶಕ್ಕೆ ಕಾಂಗ್ರೆಸ್ಸಿನ ಯಾವುದೇ ಸುಳ್ಳು ಗ್ಯಾರಂಟಿಗಳ ಉಪಯೋಗವಿಲ್ಲ, ದೇಶಕ್ಕೆ 2024 ರಲ್ಲೂ ನರೇಂದ್ರ ಮೋದಿಜಿಯೇ ಗ್ಯಾರಂಟಿ ಎಂಬ ಸ್ಪಷ್ಟ ಚಿತ್ರಣ ಗೋಚರಿಸಿದೆ, ಆ ಮೂಲಕ ಮತ್ತೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದ ಜನತೆಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡಿದ ಕಾಂಗ್ರೆಸ್ ಅದನ್ನು ಸಮರ್ಪಕವಾಗಿ ಕೊಡಲಾಗದೆ ಹತ್ತು ಹಲವು ನಿಯಮಗಳನ್ನು ಹೇರಿ ಗ್ಯಾರಂಟಿಯಿಂದ ಜನರನ್ನು ವಂಚನೆ ಮಾಡಿದ್ದನ್ನು ಸರಿಯಾಗಿ ಅರ್ಥೈಸಿಕೊಂಡ ಮತದಾರರು ಕಾಂಗ್ರೆಸಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಕರ್ನಾಟಕದಿಂದ ಅಕ್ರಮವಾಗಿ ಕೋಟ್ಯಂತರ ರೂಪಾಯಿಗಳನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಂಡ ಕಾಂಗ್ರೆಸ್ ಬಿ ಆರ್ ಎಸ್ ಪಕ್ಷದ ಆಡಳಿತ ವಿರೋಧದ ಅಲೆಯಿಂದಾಗಿ ಗೆದ್ದಿರಬಹುದು. ಆದರೆ ಮುಂದಿನ ದಿನಗಳಲ್ಲಿ ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದಲ್ಲಿಯೂ ಕೂಡ ಗ್ಯಾರಂಟಿಗಳನ್ನು ಕೊಡಲಾಗದೆ ಇಲ್ಲ ಸಲ್ಲದ ನಿಯಮಗಳನ್ನು ಹೇರಿ ಜನರಿಗೆ ಮೋಸ ಮಾಡಲಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು