Wednesday, January 22, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಕರುಗಳನ್ನು ಕೊಂದು ತಿಂದ ಚಿರತೆ, ಸ್ಥಳೀಯರಲ್ಲಿ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ, ಡಿ 5 : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ.

ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.