Wednesday, January 22, 2025
ಸುದ್ದಿ

ವಿ ದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಜನವರಿಯಿಂದ ಶಾಲೆಗಳಿಗೆ ‘ನ್ಯಾಪ್ ಕಿನ್’ ವಿತರಣೆ – ಕಹಳೆ ನ್ಯೂಸ್

ಕಳೆದ 4 ವರ್ಷಗಳಿಂದ ಸ್ಥಗಿತವಾಗಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡುತ್ತಿದ್ದು, ಜನವರಿಯಿಂದ ಶಾಲೆಯ ಹೆಣ್ಣು ಮಕ್ಕಳಿಗೆ ನ್ಯಾಪ್ತಿನ್ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರ ಮುಟ್ಟಿನ ಸಮಸ್ಯೆ ಹಾಗೂ ಶುಚಿತ್ವದ ಬಗ್ಗೆ ಜೆಡಿಎಸ್‌ ಸದಸ್ಯ ತಿಪ್ಪೇಸ್ವಾಮಿ ಮಾಡಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಟಿನ್ ವಿತರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಟಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ ಕಿನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ, 10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಟಿನ್ ವಿತರಿಸಲಾಗುತ್ತಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್‌ ಮಕ್ಕಳಿಗು ನ್ಯಾಪ್ಟಿನ್ ಗಳನ್ನ ವಿತರಿಸಲಾಗುವುದು. ಮುಟ್ಟಿನ ಕಡ್ಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಈಗಾಗಲೇ ಮಾಡುತ್ತಿದ್ದೇವೆ. ಇದರ ಬಗ್ಗೆ ಇನ್ನೂ ಜಾಗೃತಿ ಮೂಡಿಸಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು