Thursday, January 23, 2025
ಸುದ್ದಿ

ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ –ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ, ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸೂಚಿಸಲಾಯಿತು.


2024 ರ ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮವು ನಡೆಯಲಿದ್ದು, ಸದರಿ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸಲಿದ್ದು, ಜನಸಂದಣಿ ನಗರದಲ್ಲಿ ಹೆಚ್ಚಲಿದ್ದು, ಸ್ವಚ್ಛತೆ, ನೈರ್ಮಲ್ಯ, ರಸ್ತೆಗಳ ಸುಸ್ಥಿತಿ, ನೀರಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳುವುದು ಮತ್ತು ಶೌಚಾಲಯಗಳನ್ನು ಅಲ್ಲಲ್ಲಿ ನಿರ್ಮಿಸಬೇಕು ಎಂದು ತಿಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸ್ ಇಲಾಖೆಯವರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸುವುದು,

ಜಾಹೀರಾತು
ಜಾಹೀರಾತು
ಜಾಹೀರಾತು

ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ್ಣ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೊಳಗೊAಡ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ವಿಶೇಷ ವಾಹನಗಳ ಸೌಲಭ್ಯವನ್ನು ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊದುವುದು ಜೊತೆಗೆ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ಮತ್ತು ಪ್ರತಿಯೊಂದು ವ್ಯವಸ್ಥೆಯ ಮೇಲುಸ್ತುವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚಿಸಲಾಯಿತು.