Thursday, January 23, 2025
ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ..!-ಕಹಳೆ ನ್ಯೂಸ್

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ನೆಲಮಂಗಲ ಆಸ್ಪತ್ರೆ ದಾಖಲಿಸಲಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದ, ಇತ್ತೀಚೆಗಷ್ಟೇ ಜೀವಮಾನದ ಸಾಧನೆಗಾಗಿ ನಂದಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟಿ ಲೀಲಾವತಿಯವರ ಆರೋಗ್ಯದಲ್ಲಿ ಏರುಪೇರಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಲಮಂಗಲದ ಸೋಲ ದೇವನಹಳ್ಳಿ ಮನೆಯಿಂದ ಆಸ್ಪತ್ರೆಗೆ ಲೀಲಾವತಿ ಅವರನ್ನು ಶಿಫ್ಟ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ‌‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಚಿಂತನೆ ನಡೆಸಲಾಗುತ್ತಿದ್ದು, ಸದ್ಯ ಜಯದೇವ ಅಥವಾ ಕಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲು ಅವರ ಮಗ ವಿನೋದ್ ರಾಜ್ ಮುಂದಾಗಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಲೀಲಾವತಿ ಅವರನ್ನು ಇಷ್ಟು ದಿನ ಮನೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನಡೆಸಲಾಗುತ್ತಿತ್ತು. ಆದರೆ, ಈಗ ಸೀರಿಯಸ್‌ ಆದ ಹಿನ್ನೆಲೆಯಲ್ಲಿ ಅವರನ್ನು ಆದಷ್ಟು ಬೇಗ ಬೆಂಗಳೂರಿನ ಜಯದೇವ ಅಥವಾ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಲೀಲಾವತಿ ಮಗ ವಿನೋದ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಮನೆಯಿಂದ ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.