Wednesday, January 22, 2025
ಸುದ್ದಿ

ಕೃಷಿ ಮೇಳ 2023 ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಆಯೋಜಿಸಲಾದ “ಕೃಷಿ ಮೇಳ 2023” ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ನೆರವೇರಿಸಿದರು.

ನಮ್ಮ ಹಿರಿಯರು ಕೃಷಿಯನ್ನು ಬಹಳ ನಿಷ್ಠೆಯಿಂದ ಬೆವರು ಸುರಿಸಿ ಉಳಿಸಿ ಬೆಳೆಸಿದುದರಿಂದ ಇವತ್ತು ನಮಗೆ ಆಹಾರ ಸಿಗುತ್ತದೆ, ನಾವು ಆಧುನಿಕತೆ ಮತ್ತು ತಂತ್ರ ಜ್ಞಾನ ಬಳಸಿ ನಮ್ಮ ಕೃಷಿಯನ್ನು ಉಳಿಸಿ ಬೆಳೆಸ ಬೇಕು ಬಗ್ಗೆ ಬೇಕಾಗುವ ಎಲ್ಲಾ ಸಹಾಯ ಮತ್ತು ಸಹಕಾರ ನನ್ನಿಂದ ನೀಡುತ್ತೇನೆ, ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್,ಯು.ಪಿ.ಸಿ.ಎಲ್ ಅಧ್ಯಕ್ಷರು, ನಿರ್ದೇಶಕರಾದ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ,ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕೃಷಿ ಇಲಾಖೆಯ * ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು