Recent Posts

Sunday, January 19, 2025
ಸುದ್ದಿ

ಮಾರ್ಬಲ್ ಬಿದ್ದು ಕಾರ್ಮಿಕನಿಗೆ ಗಂಭೀರ ಗಾಯ: ಗಾಯಾಳು ಆಸ್ಪತ್ರೆಗೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಕ್ಸ್ಲೇಟರಿ ಬಳಿ ಮಾರ್ಬಲ್ ಅನ್ಲೋಡಿಂಗ್ ಮಾಡುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಮಾರ್ಬಲ್ ಬಿದ್ದು ಕಾರ್ಮಿಕನ ಕಾಲಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ತೀವ್ರ ರಕ್ತ ಸ್ರಾವದಿಂದ ಒದ್ದಾಡುತ್ತಿದ್ದ ಕಾರ್ಮಿಕನನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸಬೇಕಿದ್ದ ವಿಮಾನನಿಲ್ದಾಣದ ಅಂಬುಲೆನ್ಸ್ ಕಾರ್ಮಿಕನ ಸಹಾಯಕ್ಕೆ ಬರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ರೆ ಮಂಗಳೂರಿನಿಂದ ವಿಮಾನ ಪ್ರಯಾಣಿಕರೊಬ್ಬರನ್ನು ಡ್ರಾಪ್‌ಗೆ ಹೋಗಿದ್ದ ಕ್ಯಾಬ್ ಚಾಲಕ ಕೂಡಲೇ ಕಾರ್ಮಿಕನನ್ನು ತನ್ನ ಕಾರಲ್ಲಿ ಹಾಕಿ ಮಂಗಳೂರಿನ ಏ.ಜೆ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಾನವೀಯತೆ ಮೆರೆದ ಆನ್‌ಲೈನ್ ಕ್ಯಾಬ್ ಚಾಲಕ ಮಹೇಶರಿಗೆ ಸಾಮಾಜಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.