Wednesday, January 22, 2025
ರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದಲ್ಲಿ ‘370ನೇ ವಿಧಿ’ ರದ್ದತಿ, ಕೇಂದ್ರ ಸರ್ಕಾರದ ತೀರ್ಮಾನ ಎತ್ತಿ ಹಿಡಿದ ‘ಸುಪ್ರಿಂಕೋರ್ಟ್‌’ – ಕಹಳೆ ನ್ಯೂಸ್

ವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ತೀರ್ಪು ಹೊರ ಬಿದಿದ್ದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ 370 ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಹಲವಾರು ಅರ್ಜಿಗಳನ್ನು 2019 ರಲ್ಲಿ ಸಂವಿಧಾನ ಪೀಠಕ್ಕೆ ಉಲ್ಲೇಖಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು 16 ದಿನಗಳಿಂದ ಅರ್ಜಿದಾರರು ಮತ್ತು ಕೇಂದ್ರದ ವಾದಗಳನ್ನು ಆಲಿಸುತ್ತಿತ್ತು. ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಡಿಸೆಂಬರ್ 11 ಕ್ಕೆ ಕಾಯ್ದಿರಿಸಿತ್ತು.

ಆಗಸ್ಟ್ 2019 ರ ಆದೇಶವನ್ನು ಹೊರಡಿಸಲು ರಾಷ್ಟ್ರಪತಿಗಳು 370 (3) ನೇ ವಿಧಿಯಡಿ ಅಧಿಕಾರವನ್ನು ಚಲಾಯಿಸುವಲ್ಲಿ ಯಾವುದೇ ತೊಂದರೆಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ, ರಾಷ್ಟ್ರಪತಿಗಳ ಅಧಿಕಾರವನ್ನು ಚಲಾಯಿಸುವುದು ಮಾನ್ಯವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ನಿರ್ದೇಶಿಸುತ್ತೇವೆ ಅಂತ ಇದೇ ವೇಳೇ ನ್ಯಾಯಾಪೀಠ ತಿಳಿಸಿದೆ.